Daily Archives: October 24, 2015

siddaramaiah coming to Bidar

ಶೋಷಿತರ ದುಮ್ಮನ ಆಲಿಸಲು

ಸಿದ್ದರಾಮಯ್ಯ ಬರುತ್ತಿದ್ದಾರೆ: ಚಿದ್ರಿ

DSC_0361ಬೀದರ: ನವೆಂಬರ 8ರಂದು ರಾಜ್ಯದ ಹಿಂದುಳಿದ ವರ್ಗಗಳ ನಾಯಕರು, ಶೋಷಿತ ವರ್ಗಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷರೂ ಹಾಗೂ ಈ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೀದರ್‍ಗೆ ಬರುತ್ತಿದ್ದಾರೆ ಎಂದು ಕರ್ನಟಕ ಸರ್ಕರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಂಡಿತರಾವ ಚಿದ್ರಿ ತಿಳಿಸಿದರು.
ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಕರ್ನಾಟಕ ಸಾಹಿತ್ಯ ಸಂಘದ ಅವರಣದಲ್ಲಿ ಜಿಲ್ಲಾ ಶೋಷಿತ ವರ್ಗಗಳ ಒಕ್ಕೂಟದ ವತಿಯಿಂದ ವಿಜಯ ದಶಮಿ ಪ್ರಯುಕ್ತ ಪರಸ್ಪರ ಬನ್ನಿ ಹಂಚಿಕೊಳ್ಳುವ ಸೌಹಾರ್ದ ಸಭೆಯ ಅದ್ಯಕ್ಷತೆ ವಹಿಸಿ ಮಾತನಡಿದರು.